ಮಾಲೆ: ವಿದೇಶಿ ಕಾರ್ಮಿಕರ ವಸತಿಗೃಹಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 10 ಮಂದಿ ಸಾವನ್ನಪ್ಪಿದ ಘಟನೆ ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ನಡೆದಿದೆ.
ಒಂಬತ್ತು ಭಾರತೀಯರ ಸಹಿತ ಹತ್ತು ಮಂದಿ ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ನೆಲ ಅಂತಸ್ತಿನ ವಾಹನ ರಿಪೇರಿ ಗ್ಯಾರೇಜ್‌ನಿಂದ ಉಂಟಾದ ಬೆಂಕಿಯಲ್ಲಿ ನಾಶವಾದ ಕಟ್ಟಡವೊಂದರ ಮೇಲಿನ ಮಹಡಿಯಿಂದ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬೆಂಕಿಯನ್ನು ನಂದಿಸಲು ಸುಮಾರು ನಾಲ್ಕು ಗಂಟೆಗಳ ಕಾಲ ತೆಗೆದುಕೊಳ್ಳಲಾಗಿದೆ ಎಂದು ಅಗ್ನಿಶಾಮಕ ತಂಡದ ಅಧಿಕಾರಿಗಳು ತಿಳಿಸಿದ್ದಾರೆ.