Home ಟಾಪ್ ಸುದ್ದಿಗಳು ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ಮೋದಿ ಪ್ರಮಾಣವಚನಕ್ಕೆ ಮಾಲ್ಡೀವ್ಸ್ ಅಧ್ಯಕ್ಷರಿಗೆ ಆಹ್ವಾನ

ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ಮೋದಿ ಪ್ರಮಾಣವಚನಕ್ಕೆ ಮಾಲ್ಡೀವ್ಸ್ ಅಧ್ಯಕ್ಷರಿಗೆ ಆಹ್ವಾನ

ಮಾಲೆ: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ಆಹ್ವಾನಿಸಲಾಗಿದೆ.

ಭಾರತ ಸರ್ಕಾರದ ಮಂತ್ರಿಗಳ ಪರಿಷತ್ ನೀಡಿದ ಆಹ್ವಾನವನ್ನು ಸ್ವೀಕರಿಸಲಾಗಿದೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ ಪ್ರಕಟಣೆ ಮೂಲಕ ತಿಳಿಸಿದೆ.


ಭಾರತದ ಹೈಯರ್ ಕಮಿಷನರ್ ಮುನು ಮಹಾವರ್ ಅವರು ಮಾಲ್ಡೀವ್ಸ್ ಅಧ್ಯಕ್ಷರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿದ್ದಾರೆ.ಆಹ್ವಾನ ನೀಡಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದ ಅಧ್ಯಕ್ಷ ಮುಯಿಝು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಹಾಜರಾಗಿ ಮೋದಿ ಅವರಿಗೆ ಗೌರವ ನೀಡಲಾಗುವುದು ಎಂದು ಪ್ರತಿಕ್ರಿಯಿಸಿದ್ದಾರೆ.

Join Whatsapp
Exit mobile version