ಮುಂಬೈ: ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌ಗ ಏ.25ರೊಳಗೆ ಹಾಜರಾಗಲು ಮುಂಬೈನ ವಿಶೇಷ ನ್ಯಾಯಾಲಯ ಆದೇಶಿಸಿದೆ. ಹಾಜರಾಗಲು ವಿಫಲವಾದರೆ ಅಗತ್ಯ ಆದೇಶ ನೀಡಲಾಗುವುದು ಎಂದು ಎಚ್ಚರಿಸಿದೆ.
2008ರ ಸೆ. 29ರಂದು ಮಾಲೆಗಾಂವ್‌ನ ಮಸೀದಿಯೊಂದರ ಬಳಿ ದ್ವಿಚಕ್ರ ವಾಹನಕ್ಕೆ ಕಟ್ಟಿದ್ದ ಸ್ಫೋಟಕವು ಸ್ಫೋಟಗೊಂಡಿದ್ದರಿಂದ ಆರು ಜನರು ಸಾವನ್ನಪ್ಪಿ, 100 ಜನ ಗಾಯಗೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ಞಾ ಠಾಕೂರ್ ವಿಚಾರಣೆಗೆ ಶನಿವಾರ ಹಾಜರಾಗಬೇಕಿತ್ತು. ತಾನು ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವುದಾಗಿ ತಿಳಿಸಿ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಕೋರಿ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದರು.