ಹೊಸದಿಲ್ಲಿ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಿಂದ ಬಿಡುಗಡೆ ಕೋರಿ ಪ್ರಕರಣದ ಆರೋಪಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪ್ರಕರಣದಿಂದ ಬಿಡುಗಡೆ ಕೋರಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ಕಳೆದ ಜನವರಿಯಲ್ಲಿ ತಿರಸ್ಕರಿಸಿತ್ತು.
ಬಾಂಬೆ ಹೈಕೋರ್ಟಿನ ಈ ಆದೇಶವನ್ನು ಪ್ರಶ್ನಿಸಿ ಲೆ.ಕ ಪುರೋಹಿತ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದನು.
ಈ ತೀರ್ಪಿಲ್ಲಿ ಹಸ್ತಕ್ಷೇಪ ನಡೆಸಲು ಯಾವುದೇ ಕಾರಣ ಇಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್ ಮನವಿಯನ್ನು ತಿರಸ್ಕರಿಸಿದೆ.
ತಾನು ಅಧಿಕೃತ ಕರ್ತವ್ಯದಲ್ಲಿದ್ದಾಗ ಸಂಭವಿಸಿದ ಘಟನೆ ಯಾಗಿರುವುದರಿಂದ ತಮ್ಮ ವಿಚಾರಣೆ ನಡೆಸಲು ಕ್ರಿಮಿನಲ್ ದಂಡ ಸಂಹಿತೆಯ ಸೆಕ್ಷನ್ 197(2) ಅನ್ವಯ ಪ್ರಾಸಿಕ್ಯೂಶನ್ ಭಾರತೀಯ ಸೇನೆಯ ಅನುಮತಿ ಕೋರಿಲ್ಲ ಎಂದು ಪುರೋಹಿತ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದನು.