ಮಾಲೆಗಾಂವ್ ಸ್ಫೋಟ ಪ್ರಕರಣ: ವಿಚಾರಣೆಗೆ ಹಾಜರಾಗದ ಎಟಿಎಸ್ ಅಧಿಕಾರಿ ವಿರುದ್ಧ ವಾರಂಟ್ ಜಾರಿ

Prasthutha|

ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಎದುರು ವಿಚಾರಣೆಗೆ ಹಾಜರಾಗದ ಎಟಿಎಸ್ ಅಧಿಕಾರಿಯೊಬ್ಬರ ವಿರುದ್ಧ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯ ನ್ಯಾಯಾಲಯ ವಾರಂಟ್ ಜಾರಿಗೊಳಿಸಿದೆ.

- Advertisement -

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ವಾರಂಟ್ ಲಭಿಸಿರುವ ಎರಡನೇ ಎಟಿಎಸ್ ಅಧಿಕಾರಿಯಾಗಿದ್ದಾರೆ. ಬುಧವಾರ ನ್ಯಾಯಾಲಯವು ವಾರಂಟ್ ಹೊರಡಿಸಿದ ಅಧಿಕಾರಿಯ ವಿರುದ್ಧ ವಿವಿಧ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದೆ. ಕೆಲವರು ಪ್ರತಿಕೂಲವಾಗಿ ಹೇಳಿಕೆ ನೀಡಿದ್ದಾರೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ.

ಎಟಿಎಸ್ ಅಧಿಕಾರಿ ಅಸ್ವಸ್ಥಗೊಂಡಿದ್ದು, ನ್ಯಾಯಾಲಯಕ್ಕೆ ಬರಲು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿರುವುದಾಗಿ ಸರಕಾರಿ ವಕೀಲರು ತಿಳಿಸಿದ್ದಾರೆ.

- Advertisement -

ಈ ಹಿಂದೆ ಎನ್‌ಐಎ ನ್ಯಾಯಾಲಯ ಎಟಿಎಸ್ ಅಧಿಕಾರಿ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು.

ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಧೀಶ ಎ ಕೆ ಲಹೋಟಿ ಅವರ ಪೀಠ, ಅಧಿಕಾರಿ ವಿರುದ್ಧ ವಾರಂಟ್ ಹೊರಡಿಸಿದ್ದಾರೆ. ಇದಕ್ಕೂ ಮೊದಲು ಈ ಪ್ರಕರಣದಲ್ಲಿ ಕೆಲವು ಆರೋಪಿಗಳನ್ನು ಬಂಧಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದ ಮತ್ತೊಬ್ಬ ಎಟಿಎಸ್ ಅಧಿಕಾರಿ ವಿರುದ್ಧ ವಿಶೇಷ ಎನ್‌ಐಎ ನ್ಯಾಯಾಲಯ ಸೆಪ್ಟೆಂಬರ್‌ನಲ್ಲಿ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು. ಪ್ರಕರಣದಲ್ಲಿ ಅವರೂ ಸಾಕ್ಷಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಇದುವರೆಗೆ 280 ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದ್ದು, ಅವರಲ್ಲಿ 29 ಮಂದಿ ಪ್ರತಿಕೂಲ ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 29, 2008 ರಂದು ಮುಂಬೈನಿಂದ 200 ಕಿಮೀ ದೂರದಲ್ಲಿರುವ ನಾಸಿಕ್ ಜಿಲ್ಲೆಯ ಮಾಲೆಗಾಂವ್ ಪಟ್ಟಣದ ಮಸೀದಿಯ ಬಳಿ ಮೋಟಾರು ಸೈಕಲ್‌ಗೆ ಕಟ್ಟಲಾದ ಸ್ಫೋಟಕ ಸಾಧನವು ಸ್ಫೋಟಗೊಂಡ ಬಳಿಕ ಆರು ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್, ಶುದಾಕರ್ ದ್ವಿವೇದಿ, ಮೇಜರ್ ರಮೇಶ್ ಉಪಾಧ್ಯಾಯ (ನಿವೃತ್ತ), ಅಜಯ್ ರಾಹಿರ್ಕರ್, ಸುಧಾಕರ್ ದ್ವಿವೇದಿ, ಸುಧಾಕರ್ ಚತುರ್ವೇದಿ ಮತ್ತು ಸಮೀರ್ ಕುಲಕರ್ಣಿ ಜಾಮೀನಿನ ಮೇಲೆ ಹೊರಗಿದ್ದಾರೆ.



Join Whatsapp