Home ಟಾಪ್ ಸುದ್ದಿಗಳು ಕೆ ಜೆ ಜಾರ್ಜ್ ವಿರುದ್ಧ ದುರುದ್ದೇಶಪೂರಿತ ಪೋಸ್ಟ್: ಆರೋಪಿಯ ಸೆರೆ

ಕೆ ಜೆ ಜಾರ್ಜ್ ವಿರುದ್ಧ ದುರುದ್ದೇಶಪೂರಿತ ಪೋಸ್ಟ್: ಆರೋಪಿಯ ಸೆರೆ

ಬೆಂಗಳೂರು: ಇಂಧನ ಖಾತೆಯ ಸಚಿವ ಕೆಜೆ ಜಾರ್ಜ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ತೆಲಂಗಾಣ ಮಾಜಿ ಪಾಲಿಕೆ ಸದಸ್ಯನ ಪುತ್ರನನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಬಿಆರ್ ಎಸ್ ಪಕ್ಷದ ಕಾರ್ಯಕರ್ತ, ಪಕ್ಷದ ಐಟಿ ಸೆಲ್ ಉದ್ಯೋಗಿಯಾಗಿರುವ ತೆಲಂಗಾಣ ಕರೀಂನಗರ ನಿವಾಸಿ ರವಿಕಾಂತ್ ಶರ್ಮಾ (33) ಬಂಧಿತ ಆರೋಪಿ. ಆರೋಪಿಯ ತಂದೆ ಸಹ ಬಿಆರ್ ಎಸ್ ಪಕ್ಷದ ಮಾಜಿ ಕಾರ್ಪೋರೇಟರ್ ಎಂದು ತಿಳಿದು ಬಂದಿದೆ. ಗೃಹ ಜ್ಯೋತಿ ಯೋಜನೆಯ ಬಗ್ಗೆ ನಕಲಿ ಆಡಿಯೋ ಕ್ಲಿಪ್ ಶೇರ್ ಮಾಡಿದ್ದಕ್ಕೆ ಬೆಸ್ಕಾಂ ಜನರಲ್ ಮ್ಯಾನೇಜರ್ ಅವರು ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಆರೋಪಿಯನ್ನು ಬಂಧಿಸಿ ಸೈಬರ್ ಕ್ರೈಮ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Join Whatsapp
Exit mobile version