ಮಾಲ್‌ ಗೆ ಬೆಂಕಿ: ಶಾಪಿಂಗ್‌ ಮಾಡುತ್ತಿದ್ದ 27 ಮಂದಿ ಸಜೀವ ದಹನ; ಹಲವರ ಸ್ಥಿತಿ ಗಂಭೀರ

Prasthutha: December 17, 2021

ಒಸಾಕ: ಮಾಲ್‌ ಗೆ ಬೆಂಕಿ ಬಿದ್ದು, 27 ಮಂದಿ ಸಜೀವ ದಹನಗೊಂಡು ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ ಜಪಾನ್‌ ನ ಒಸಾಕಾದಲ್ಲಿ ನಡೆದಿದೆ.

ಮಾಲ್ ನ ನಾಲ್ಕನೆಯ ಅಂತಸ್ತಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಎಲ್ಲೆಡೆ ದಟ್ಟ ಹೊಗೆಯಾಡುತ್ತಿದ್ದು, ಇದರಿಂದ ಅನೇಕ ಮಂದಿ ಹೃದಯಾಘಾತದಿಂದಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಕೆಲವರು ತಪ್ಪಿಸಿಕೊಳ್ಳುವ ಭರದಲ್ಲಿ ದಹಿಸಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಕಟ್ಟಡದಲ್ಲಿ ಕ್ಲಿನಿಕ್ ಇತ್ತು. ಜತೆಗೆ ಹಲವಾರು ಪುಸ್ತಕದ ಮಳಿಗೆಗಳು ಇದ್ದವು. ಎಲ್ಲವೂ ಹೊತ್ತಿ ಉರಿದಿದೆ. ಅಲ್ಲದೆ ಪ್ರಾಥಮಿಕ ತನಿಖೆಯಲ್ಲಿ ಬೆಂಕಿಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಒಸಾಕಾ ನಗರದ ಅಗ್ನಿಶಾಮಕ ಇಲಾಖೆಯ ಅಧಿಕಾರಿ ಅಕಿರಾ ಕಿಶಿಮೊಟೊ ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ