ಕಾಂಗ್ರೆಸ್ ಗೆ ಇಡಿ ಕಿರುಕುಳ: ಮಲ್ಲಿಕಾರ್ಜುನ ಖರ್ಗೆ ಆರೋಪ

Prasthutha|

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೂರನೇ ದಿನವೂ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ವಿಚಾರಣೆಗೆ ಹಾಜರಾಗಲಿದ್ದು, ಕಾಂಗ್ರೆಸ್ ಪಕ್ಷಕ್ಕೆ ಇ.ಡಿ ಕಿರುಕುಳ ನೀಡುತ್ತಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

- Advertisement -

ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿಲ್ಲ. ಹಾಗಿದ್ದರೂ ಇ.ಡಿ ಕಚೇರಿಗೆ ಪದೇ ಪದೇ ಕರೆದು ಕಿರುಕುಳ ನೀಡುತ್ತಿದೆ. ಅಲ್ಲದೆ ನಮ್ಮ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸಲು  ಪ್ರಯತ್ನಿಸುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಏತನ್ಮಧಯೆ, ಬೆಲೆ ಏರಿಕೆಯ ವಿರುದ್ಧ ಧ್ವನಿ ಎತ್ತಿದ ಸದಸ್ಯರ ಅಮಾನತನ್ನು ಹಿಂಪಡೆಯುವಂತೆ ಪ್ರತಿಪಕ್ಷಗಳು ಲೋಕಸಭೆಯ ಸ್ಪೀಕರ್ ಮತ್ತು ರಾಜ್ಯಸಭೆಯ ಸಭಾಪತಿಗಳಿಗೆ ಮನವಿ ಸಲ್ಲಿಸಲಿವೆ ಎಂದರು.

- Advertisement -

ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಮೇಲೆ ಜಿಎಸ್ಟಿ ಹೇರಿಕೆಗೆ ಸಂಬಂಧಿಸಿದಂತೆ ಕಳೆದ 7 ದಿನಗಳಿಂದ ನಾವು ಧ್ವನಿ ಎತ್ತುತ್ತಿದ್ದೇವೆ, ಆದರೆ ಸರ್ಕಾರ ಚರ್ಚೆಗೆ ಸಿದ್ಧವಾಗಿಲ್ಲ ಎಂದು ಅವರು ಹೇಳಿದರು.

ಸಂಸದರ ಅಮಾನತು ವಿಷಯದ ಬಗ್ಗೆ ಚರ್ಚಿಸಲು ಮತ್ತು ಸದನದಲ್ಲಿ ಕಾರ್ಯತಂತ್ರ ರೂಪಿಸಲು ಇಂದು ವಿರೋಧ ಪಕ್ಷಗಳ ಸಭೆ ನಡೆಯಿತು.



Join Whatsapp