ಲಾಕ್‌ ಡೌನ್‌ ಗೂ ಮೊದಲು ಪ್ಯಾಕೇಜ್ ಘೋಷಿಸಿ: ಮಲ್ಲಿಕಾರ್ಜುನ ಖರ್ಗೆ

Prasthutha|

ಕಲಬುರಗಿ:  ಲಾಕ್‌ ಡೌನ್ ಮಾಡುವುದೇ ಅನಿವಾರ್ಯವಾದರೆ ಕಾರ್ಮಿಕರು, ರೈತರು ಸೇರಿದಂತೆ ಎಲ್ಲ ಬಗೆಯ ದುಡಿಯುವ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

- Advertisement -

ಈ ಬಗ್ಗೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಬಾರಿ ಲಾಕ್‌ ಡೌನ್‌ ಘೋಷಣೆ ಮಾಡಿದ ಸಂದರ್ಭದಲ್ಲೂ ಸರ್ಕಾರ ಸೂಕ್ತ ಪ್ಯಾಕೇಜನ್ನು ಜನರಿಗೆ ತಲುಪಿಸಿಲ್ಲ. ಕಟ್ಟಡ ಕಾರ್ಮಿಕರಿಗೆ ಅವರ ನಿಧಿಯಿಂದಲೇ ನೆರವು ಕೊಟ್ಟಿದೆಯೇ ಹೊರತು ತನ್ನ ಬೊಕ್ಕಸದಿಂದ ಕೊಡಲಿಲ್ಲ. ಆ ನಿಧಿಯೂ ಕಾರ್ಮಿಕರಿಗೆ ದೊರಕಿಲ್ಲ. ಹೀಗಾಗದಂತೆ ಎಚ್ಚರ ವಹಿಸಬೇಕು’ ಎಂದರು.

‘ಈಗಲೂ ದಿಢೀರ್‌ ಎಂದು ಲಾಕ್‌ ಡೌನ್‌ ಮಾಡಿದರೆ ಆರ್ಥಿಕತೆಗೆ ದೊಡ್ಡ ಪೆಟ್ಟು ಬೀಳಲಿದೆ. ಲಾಕ್‌ ಡೌನ್‌ ಸಂದರ್ಭದಲ್ಲಿ ಜನರು ವಸ್ತುಗಳ ಖರೀದಿಗೆ ಹೆಚ್ಚು ಆಸಕ್ತಿ ವಹಿಸುವುದಿಲ್ಲ. ಇದರಿಂದ ಉತ್ಪಾದನೆ ಕಡಿಮೆಯಾಗಲಿದ್ದು, ಇದರಿಂದ ಸರ್ಕಾರಕ್ಕೆ ಬರಬೇಕಾದ ತೆರಿಗೆಯೂ ಕಡಿಮೆಯಾಗಲಿದೆ. ಹಣದುಬ್ಬರ ಪ್ರಮಾಣವೂ ಹೆಚ್ಚಾಗಲಿದೆ. ಆದ್ದರಿಂದ ಎಲ್ಲವನ್ನು ಪರಾಮರ್ಶೆ ಮಾಡಿ ನಿರ್ಧಾರ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

Join Whatsapp