ಎಂ.ಎಸ್. ರಕ್ಷಾ ರಾಮಯ್ಯಗೆ ಎಐಸಿಸಿ ಸದಸ್ಯತ್ವ: ಮಲ್ಲಿಕಾರ್ಜುನ ಖರ್ಗೆ ನೇಮಕ

Prasthutha|

ಬೆಂಗಳೂರು: ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಏಐಸಿಸಿ ಸದಸ್ಯರನ್ನಾಗಿ ನೇಮಿಸಲಾಗಿದೆ.

- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ನೇಮಕ ಮಾಡಿದ್ದಾರೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್  ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಯುವ ಕಾಂಗ್ರೆಸ್ ವಿಭಾಗದಿಂದ ರಕ್ಷಾ ರಾಮಯ್ಯ ಅವರಿಗೆ ಎಐಸಿಸಿಯಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗಿದ್ದು, ಯುವ ಸಮೂಹಕ್ಕೆ ಆದ್ಯತೆ ನೀಡಲಾಗಿದೆ.

Join Whatsapp