ಸಂಸತ್ತಿನಲ್ಲಿ ಪ್ರಧಾನಿ ಮೋದಿ ಜೊತೆ ಭೋಜನ ಸವಿದ ಮಲ್ಲಿಕಾರ್ಜುನ ಖರ್ಗೆ

Prasthutha|

ದೆಹಲಿ: ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್ ಹಾಗೂ ಇತರ ಸಂಸದರೊಂದಿಗೆ ಭೋಜನ ಸವಿದಿದ್ದಾರೆ.

- Advertisement -


ಮಂಗಳವಾರ ನಡೆದ ವಿಶೇಷ ಭೋಜನಕೂಟದಲ್ಲಿ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಸಿರಿಧಾನ್ಯಗಳ ಭೋಜನ ಸವಿದರು. ಪ್ರಧಾನಿ ಮೋದಿ, ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಸಚಿವರು, ಸಂಸದರು ರಾಗಿ ಖಾದ್ಯಗಳನ್ನು ಸವಿದರು.


ಈ ಫೋಟೊವನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದು, 2023 ಅನ್ನು ಅಂತಾರಾಷ್ಟ್ರೀಯ ರಾಗಿ ವರ್ಷವೆಂದು ಗುರುತಿಸಲು ತಯಾರಿ ನಡೆಸುತ್ತಿರುವಾಗ, ಸಂಸತ್ತಿನಲ್ಲಿ ರಾಗಿ ಭಕ್ಷ್ಯಗಳನ್ನು ಬಡಿಸಿದ ರುಚಿಕರವಾದ ಊಟದಲ್ಲಿ ಭಾಗವಹಿಸಿದ್ದೇವೆ. ಪಕ್ಷಾತೀತವಾಗಿ ಭಾಗವಹಿಸಿರುವುದು ಸಂತಸ ತಂದಿದೆ” ಎಂದು ಬರೆದುಕೊಂಡಿದ್ದಾರೆ.



Join Whatsapp