ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ ನೀಡುವ ವಾರ್ಷಿಕ ಪ್ರಶಸ್ತಿ ಪಟ್ಟಿ ಬಿಡುಗಡೆಯಾಗಿದ್ದು, 2022ನೇ ಸಾಲಿನ ‘ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ.
ಇನ್ನು ವರ್ಷದ ವ್ಯಕ್ತಿ ‘ವಿಶೇಷ ಪ್ರಶಸ್ತಿ’ಗೆ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭಾಜನರಾಗಿದ್ದಾರೆ.
ಈ ವರ್ಷದಲ್ಲಿ ಒಟ್ಟು 36 ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಗುತ್ತಿದ್ದು, ‘ವಾರ್ಷಿಕ ಪ್ರಶಸ್ತಿ’ಗೆ ಶಿವಾನಂದ ತಗಡೂರು ಹಾಗೂ ಓಂಕಾರ ಕಾಕಡೆ ಸೇರಿದಂತೆ 33 ಮಂದಿಯನ್ನು ಆಯ್ಕೆ ಮಾಡಲಾಗಿದೆ.
ಡಿಸೆಂಬರ್ 31 ರಂದು ಕಬ್ಬನ್ ಪಾರ್ಕ್ ನಲ್ಲಿರುವ ಪ್ರೆಸ್ ಕ್ಲಬ್’ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.