ಮಲ್ಲಿಕಾರ್ಜುನ ಖರ್ಗೆ ಗೆ ‘ವರ್ಷದ ವ್ಯಕ್ತಿ’ ಪ್ರಶಸ್ತಿ

Prasthutha|

ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ ನೀಡುವ ವಾರ್ಷಿಕ ಪ್ರಶಸ್ತಿ ಪಟ್ಟಿ ಬಿಡುಗಡೆಯಾಗಿದ್ದು, 2022ನೇ ಸಾಲಿನ ‘ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -

ಇನ್ನು ವರ್ಷದ ವ್ಯಕ್ತಿ ‘ವಿಶೇಷ ಪ್ರಶಸ್ತಿ’ಗೆ ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಹಾಗೂ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಭಾಜನರಾಗಿದ್ದಾರೆ.

ಈ ವರ್ಷದಲ್ಲಿ ಒಟ್ಟು 36 ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಗುತ್ತಿದ್ದು, ‘ವಾರ್ಷಿಕ ಪ್ರಶಸ್ತಿ’ಗೆ ಶಿವಾನಂದ ತಗಡೂರು ಹಾಗೂ ಓಂಕಾರ ಕಾಕಡೆ ಸೇರಿದಂತೆ 33 ಮಂದಿಯನ್ನು ಆಯ್ಕೆ ಮಾಡಲಾಗಿದೆ.

- Advertisement -

ಡಿಸೆಂಬರ್ 31 ರಂದು ಕಬ್ಬನ್ ಪಾರ್ಕ್ ನಲ್ಲಿರುವ ಪ್ರೆಸ್ ಕ್ಲಬ್’ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Join Whatsapp