Home ಟಾಪ್ ಸುದ್ದಿಗಳು ಇಸ್ರೇಲ್ ಸೇನೆಗೆ 15 ಸಾವಿರ ಭಾರತೀಯರ ನೇಮಕ: ಮೋದಿ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ

ಇಸ್ರೇಲ್ ಸೇನೆಗೆ 15 ಸಾವಿರ ಭಾರತೀಯರ ನೇಮಕ: ಮೋದಿ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ

ನವದೆಹಲಿ: ಮೋದಿ ಸರ್ಕಾರದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಸಹಕಾರ ಒಪ್ಪಂದವು ಪಶ್ಚಿಮ ಏಷ್ಯಾ ಯುದ್ಧಕ್ಕಾಗಿ ಇಸ್ರೇಲ್ ಸೇನೆಗೆ ಸುಮಾರು 15,000 ಭಾರತೀಯರನ್ನು ನೇಮಕ ಮಾಡಿಕೊಳ್ಳಲು ಅನುಕೂಲ ಮಾಡಿಕೊಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.


ಈ ಕುರಿತು ಎಕ್ಸ್ ಮಾಡಿರುವ ಅವರು, ‘ಕೌಶಲ್ಯವಿಲ್ಲದ, ಅರೆ ಕುಶಲ ಮತ್ತು ವಿದ್ಯಾವಂತ ಯುವಕರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಯುದ್ಧಪೀಡಿತ ದೇಶಗಳಲ್ಲಿ ಹೆಚ್ಚಿನ ಸಂಬಳಕ್ಕಾಗಿ ಸೇವೆ ಸಲ್ಲಿಸಲು ಸಿದ್ಧರಿದ್ದಾರೆ ಎನ್ನುತ್ತಿವೆ ವರದಿಗಳು. ಇದರರ್ಥ ಉದ್ಯೋಗ ಸೃಷ್ಟಿ ಕುರಿತಾದ ನಿಮ್ಮ ಹೇಳಿಕೆಗಳು ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸೃಷ್ಟಿಸಿದ ಸುಳ್ಳಲ್ಲದೆ ಬೇರೇನು ಅಲ್ಲ ಎಂಬುದಾಗಿದೆ’ಎಂದು ಕಿಡಿಕಾರಿದ್ದಾರೆ.


ಯುದ್ಧಪೀಡಿತ ದೇಶಗಳಲ್ಲಿ ಬಲವಂತವಾಗಿ ಉದ್ಯೋಗಕ್ಕೆ ಸೇರುವಂತೆ ಹರಿಯಾಣದ ಯುವಕರಿಗೆ ಒತ್ತಡ ಹಾಕಲಾಗಿದೆ. ನಾಳಿನ ಚುನಾವಣೆಯಲ್ಲಿ ಹರಿಯಾಣದ ಜನ ನಿಮಗೆ ಸೂಕ್ತ ಉತ್ತರ ಕೊಡಲಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.


‘ಪಶ್ಚಿಮ ಏಷ್ಯಾದಲ್ಲಿ ಯುದ್ಧ ನಡೆಯುತ್ತಿರುವ ಈ ಸಂದರ್ಭದಲ್ಲಿ, ರಾಷ್ಟ್ರೀಯ ಕೌಶಲಾಭಿವೃದ್ಧಿ ಸಹಕಾರದಡಿ ಇಸ್ರೇಲ್ ಸೇನೆಗೆ 15,000 ಭಾರತೀಯರ ನೇಮಕಕ್ಕೆ ಅನುಕೂಲ ಮಾಡಿಕೊಡಲಾಗುತ್ತಿದೆ’ಎಂದು ಅವರು ಟೀಕಿಸಿದ್ದಾರೆ.

Join Whatsapp
Exit mobile version