ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಅಧಿಕಾರ ಸ್ವೀಕಾರ

Prasthutha|

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಅಕ್ಟೋಬರ್ 26) ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ

- Advertisement -

24 ವರ್ಷಗಳ ನಂತರ ಅಧಿಕಾರ ವಹಿಸಿಕೊಂಡ ಮೊದಲ ಗಾಂಧಿಯೇತರ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಖರ್ಗೆ ಪಾತ್ರರಾಗಿದ್ದಾರೆ.  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಘಟನೆಯ ಕೆ.ಸಿ.ವೇಣುಗೋಪಾಲ್ ಅವರು ಪಕ್ಷದ ಎಲ್ಲಾ ನಾಯಕರಿಗೆ ಆಹ್ವಾನ ಪತ್ರ ಕಳುಹಿಸಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ, ಎಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು, ಸಂಸದರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಸಿಎಲ್ಪಿ ನಾಯಕರು, ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಅಧ್ಯಕ್ಷರು ಮತ್ತು ಇತರ ಎಐಸಿಸಿ ಪದಾಧಿಕಾರಿಗಳು ಉಪಸ್ಥಿತರಿರುವ ಸಾಧ್ಯತೆಯಿದೆ.

ಅಕ್ಟೋಬರ್ 17 ರಂದು ನಡೆದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಖರ್ಗೆ ಅವರು ತಮ್ಮ ಪ್ರತಿಸ್ಪರ್ಧಿ ಸಂಸದ ಶಶಿ ತರೂರ್ ಅವರನ್ನು ಭಾರಿ ಅಂತರದಿಂದ ಸೋಲಿಸಿದ್ದರು. ಅಧ್ಯಕ್ಷೀಯ ಚುನಾವಣೆಯಲ್ಲಿ ಖರ್ಗೆ 7,897 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ತರೂರ್ 1,072 ಮತಗಳನ್ನು ಪಡೆದಿದ್ದರು

Join Whatsapp