ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ದೆಹಲಿಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಅಧಿಕೃತವಾಗಿ ಪದಗ್ರಹಣ ಮಾಡಿದರು.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 24 ವರ್ಷಗಳ ಬಳಿಕ ಗಾಂಧಿಯೇತರ ಕುಟುಂಬದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುತ್ತಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು, ಸಂಸದರು, ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು, ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಾಧ್ಯಕ್ಷರು ಮತ್ತು ಎಐಸಿಸಿಯ ಇತರ ಪದಾಧಿಕಾರಿಗಳು ಹಾಜರಾಗಿದ್ದಾರೆ.
ಇದಕ್ಕೂ ಮೊದಲು ಮಲ್ಲಿಕಾರ್ಜುನ ಖರ್ಗೆ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿಯವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು.