ಟ್ರಂಪ್‌ ಮೇಲಿನ ಗುಂಡಿನ ದಾಳಿಯನ್ನು ಖಂಡಿಸಿದ ಮಲ್ಲಿಕಾರ್ಜುನ ಖರ್ಗೆ

Prasthutha|

ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ನಡೆದಿರುವ ಗುಂಡಿನ ದಾಳಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಖಂಡಿಸಿದ್ದಾರೆ

- Advertisement -

‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ನಡೆದಿರುವ ದಾಳಿಯಿಂದ ತೀವ್ರ ಆಘಾತವಾಗಿದೆ. ಈ ಹೇಯ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇಂತಹ ಹಿಂಸಾಚಾರಕ್ಕೆ ಯಾವುದೇ ಪ್ರಜಾಪ್ರಭುತ್ವ ಮತ್ತು ನಾಗರಿಕ ಸಮಾಜದಲ್ಲಿ ಅವಕಾಶವಿಲ್ಲ. ಭಾರತವು ಅಮೆರಿಕದ ಜನರೊಂದಿಗೆ ನಿಂತಿದೆ. ಗಾಯಗೊಂಡವರ ಕುಟುಂಬಕ್ಕೆ ನಾವು ಸಂತಾಪ ವ್ಯಕ್ತಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಪೆನ್ಸಿಲ್ವೇನಿಯಾದಲ್ಲಿ ಶನಿವಾರ ಸಂಜೆ ಆಯೋಜನೆಗೊಂಡಿದ್ದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಡೊನಾಲ್ಡ್‌ ಟ್ರಂಪ್ ಅವರ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಟ್ರಂಪ್ ಅವರಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಭಾರತದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಅಮೆರಿಕ ಅಧ್ಯಕ್ಷ ಜೋ ಬೈಡನ್, ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೇರಿದಂತೆ ಹಲವು ಜಾಗತಿಕ ನಾಯಕರು ಟ್ರಂಪ್‌ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿದ್ದಾರೆ.



Join Whatsapp
Exit mobile version