ಬೆಂಗಳೂರು: ವಿವಾದಿತ ಹೇಳಿಕೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಶಾಸಕರನ್ನು ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರು ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ.
ನಮ್ಮ ರಾಷ್ಟ್ರ ಧ್ವಜವನ್ನ ಎಲ್ಲರೂ ಒಪ್ಪಿಕೊಂಡಿದ್ದಾರೆ. ಅಂತಹ ಧ್ವಜಕ್ಕೆ ಅವಮಾನ ಮಾಡಿವ ರೀತಿಯಲ್ಲಿ ಮಾತನಾಡಿರುವ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಇದಕ್ಕೂ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
ಕಾಂಗ್ರೆಸ್ ನಾಯಕರ ಮನವೊಲಿಸಲು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರಾದರೂ ಪ್ರತಿಪಕ್ಷ ತನ್ನ ಪಟ್ಟು ಸಡಿಲಿಸಿಲ್ಲ.