Home ಕರಾವಳಿ ಮಲ್ಪೆ: ನ್ಯಾಷನಲ್ ವಿಮೆನ್ಸ್ ಫ್ರಂಟ್ ನಿಂದ ಸಾರ್ವಜನಿಕ ರಕ್ತದಾನ ಶಿಬಿರ

ಮಲ್ಪೆ: ನ್ಯಾಷನಲ್ ವಿಮೆನ್ಸ್ ಫ್ರಂಟ್ ನಿಂದ ಸಾರ್ವಜನಿಕ ರಕ್ತದಾನ ಶಿಬಿರ

ಉಡುಪಿ: ನ್ಯಾಷನಲ್ ವಿಮೆನ್ಸ್ ಫ್ರಂಟ್ ಮಲ್ಪೆ ಘಟಕದ ವತಿಯಿಂದ ಮಣಿಪಾಲ K M C ಆಸ್ಪತ್ರೆಯ ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರ ಮಲ್ಪೆ ಅಬೂಬಕರ್ ಸಿದ್ದೀಕ್ ಜಾಮಿಯಾ ಮಸೀದಿಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯಾಷನಲ್ ವಿಮೆನ್ಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷೆ ರಹಮತುನ್ನೀಸಾ ವಹಿಸಿದ್ದರು, ಅತಿಥಿಗಳಾಗಿ ನ್ಯಾಷನಲ್ ವಿಮೆನ್ಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯೆ ನಸೀಮಾ ಝುರೈ, ಯುವ ವೈದ್ಯೆ ಡಾ. ನಸೂಹಾ ಮಲ್ಪೆ, K M C ರಕ್ತ ನಿಧಿ ಅಧಿಕಾರಿ ಡಾ.ಆನ್ಸಿ, ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ಸದಸ್ಯೆ ನಿಧಾ ಅಫ್ರಾ ಭಾಗವಹಿಸಿದ್ದರು. ಶಿಬಿರದಲ್ಲಿ ಸುಮಾರು 50 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಸಮ್ರೀನ್ ಅಫ್ರೋಝ್ ಕಾರ್ಯಕ್ರಮ ನಿರೂಪಿಸಿದರು.

Join Whatsapp
Exit mobile version