ಬ್ಯಾಂಕ್ ವಂಚನೆ ಪ್ರಕರಣ: ಮಲ್ಯ, ನೀರವ್, ಮೆಹುಲ್ ರಿಂದ 792.11 ಕೋಟಿ ರೂ. ವಸೂಲಿ

Prasthutha|

ನವದೆಹಲಿ: ಬ್ಯಾಂಕುಗಳಿಗೆ ವಂಚನೆ ಮಾಡಿ ವಿದೇಶಗಳಿಗೆ ಪರಾರಿಯಾಗಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ 792.11 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ವಸೂಲಿ ಮಾಡಿದೆ.

- Advertisement -

ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರಿಗೆ ಸೇರಿದ ಷೇರುಗಳ ಮಾರಾಟದಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು 792.11 ಕೋಟಿ ರೂ. ವಸೂಲಿ ಮಾಡಿದೆ ಎಂದು ಇಡಿ ಅಧಿಕೃತವಾಗಿ ಮಾಹಿತಿ ನೀಡಿದೆ.

ವಿಜಯ್ ಮಲ್ಯ 9 ಸಾವಿರ ಕೋಟಿ ರೂ. ಗಳನ್ನು ಬ್ಯಾಂಕುಗಳಿಗೆ ಪಾವತಿ ಮಾಡಬೇಕಿತ್ತು. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆವೆಸಗಿದ ಆರೋಪಿಗಳಾದ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ 13 ಸಾವಿರ ಕೋಟಿ ರೂ. ಪಾವತಿಸಬೇಕಾಗಿತ್ತು. ಈಗಾಗಲೇ ಎಸ್ ಬಿಐ ಒಕ್ಕೂಟವು 7,181 ಕೋಟಿ ರೂ. ವಸೂಲಿ ಮಾಡಿದೆ.

Join Whatsapp