Home ಟಾಪ್ ಸುದ್ದಿಗಳು ಜ. 22 ರಂದು ಕೋಲ್ಕತ್ತಾದಲ್ಲಿ ‘ಸಾಮರಸ್ಯ ರ್‍ಯಾಲಿ’ ಘೋಷಿಸಿದ ಮಮತಾ ಬ್ಯಾನರ್ಜಿ

ಜ. 22 ರಂದು ಕೋಲ್ಕತ್ತಾದಲ್ಲಿ ‘ಸಾಮರಸ್ಯ ರ್‍ಯಾಲಿ’ ಘೋಷಿಸಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನಾ ಸಮಾರಂಭ ನಡುವೆ ಜನವರಿ 22 ರಂದು ಕೋಲ್ಕತ್ತಾದಲ್ಲಿ ಎಲ್ಲಾ ಧರ್ಮಗಳ ಜನರೊಂದಿಗೆ ‘ಸಾಮರಸ್ಯ ರ್‍ಯಾಲಿ’ ನಡೆಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.


ಮಮತಾ ಬ್ಯಾನರ್ಜಿ ಅವರು ಜನವರಿ 22 ರಂದು ಕಾಳಿಘಾಟ್ ದೇವಸ್ಥಾನದಲ್ಲಿ ಕಾಳಿ ದೇವಿಗೆ ಪೂಜೆ ಸಲ್ಲಿಸಿದ ನಂತರ ದಕ್ಷಿಣ ಕೋಲ್ಕತ್ತಾದ ಹಜ್ರಾ ಕ್ರಾಸಿಂಗ್ ನಿಂದ ‘ಸಾಮರಸ್ಯ ರ್‍ಯಾಲಿ’ ಪ್ರಾರಂಭಿಸಲಿದ್ದಾರೆ.


ಜನವರಿ 22 ರಂದು ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇನೆ. ನಂತರ ಎಲ್ಲ ಧರ್ಮದವರೊಂದಿಗೆ ಸೌಹಾರ್ದ ಸಮಾವೇಶದಲ್ಲಿ ಪಾಲ್ಗೊಳ್ಳುತ್ತೇನೆ. ಇದಕ್ಕೂ ಬೇರೆ ಯಾವುದೇ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version