ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಟ್ವಿಟರ್ನಿಂದ ರಾಜ್ಯಪಾಲ ಜಗದೀಪ್ ಧನಕರ್ನನ್ನು ಬ್ಲಾಕ್ ಮಾಡಿರುವುದಾಗಿ ತಿಳಿಸಿದ್ದಾರೆ.
ಸರಕಾರದ ವಿರುದ್ಧ ರಾಜ್ಯಪಾಲ ಜಗದೀಪ್ ಧನಕರ್ ಅವರು ಹಲವಾರು ಪೋಸ್ಟ್ ಗಳನ್ನು ಹಾಕುತ್ತಿದ್ದರು.ಅಂತಹ ಪೂಸ್ಟ್ ಗಳು ಕಿರಿಕಿರಿಯಾಗುತ್ತಿದ್ದು ಹಾಗೂ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಹಲವಾರು ಸಂದರ್ಭಗಳಲ್ಲಿ ರಾಜ್ಯಪಾಲರು ಬೆದರಿಕೆಗಳನ್ನೂ ಹಾಕಿದ್ದಾರೆ. ಹೀಗಾಗಿ ನನ್ನ ಟ್ವಿಟ್ಟರ್ ಖಾತೆಯಿಂದ ಅವರನ್ನು ಬ್ಲಾಕ್ ಮಾಡಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಈ ಬಗ್ಗೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಧನಕರ್ ಅವರನ್ನು ಪದಚ್ಯುತಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಬಾರಿ ಪತ್ರ ಬರೆದಿದ್ದೇನೆ. ಆದರೂ ಇದುವರೆಗೆ ಪ್ರಧಾನಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.