ಪ್ರಧಾನಿ ಮೋದಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ: ಬಂಗಾಳಕ್ಕೆ ಬಾಕಿ ಮೊತ್ತ ಬಿಡುಗಡೆಗೆ ಒತ್ತಾಯ

Prasthutha|

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತಮ್ಮ ಸರ್ಕಾರ ದೀರ್ಘಕಾಲದಿಂದ ಬೇಡಿಕೆ ಇಡುತ್ತಿರುವ ಕೇಂದ್ರದ ಯೋಜನೆ ಅಡಿಯಲ್ಲಿ ಬಂಗಾಳಕ್ಕೆ ಬಾಕಿಯಿರುವ ಮೊತ್ತಗಳನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ.

- Advertisement -

ಎಂಜಿಎನ್‌ಆರ್‌ಇಜಿಎ, ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆ ಸೇರಿದಂತೆ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯಕ್ಕೆ ಬರಬೇಕಾದ ಹಣವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಈ ಯೋಜನೆಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸುಮಾರು 17996 ಕೋಟಿ ಬಾಕಿಯಿದೆ,” ಎಂದ ಅವರು, ಪ್ರಧಾನಿಗೆ ಲಿಖಿತ ಮಾಹಿತಿಯ ಮೂಲಕ ಒತ್ತಾಯಿಸಿದ್ದಾರೆ.

Join Whatsapp