Home ಟಾಪ್ ಸುದ್ದಿಗಳು ಮಮತಾ ಬ್ಯಾನರ್ಜಿ ಸಿಎಎ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ: ಸ್ಮೃತಿ ಇರಾನಿ

ಮಮತಾ ಬ್ಯಾನರ್ಜಿ ಸಿಎಎ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ: ಸ್ಮೃತಿ ಇರಾನಿ

ಬುರ್ದ್ವಾನ್: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ವಿರೋಧಿಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ , ತೃಣಮೂಲ ಕಾಂಗ್ರೆಸ್ ವರಿಷ್ಠರು ತಮ್ಮ ಮತ ಬ್ಯಾಂಕ್ ಅನ್ನು ರಕ್ಷಿಸಲು ಕೆಲವು ಸಮುದಾಯಗಳನ್ನು ದಾರಿ ತಪ್ಪಿಸುತ್ತಾರೆ ಎಂದು ದೂರಿದ್ದಾರೆ.


ಬಿಜೆಪಿ ಸಭೆಗಾಗಿ ಇರಾನಿ ಮಂಗಳವಾರ ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್ ಜಿಲ್ಲೆಗೆ ಭೇಟಿ ನೀಡಿದ್ದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸ್ಮೃತಿ, ಹಿಂದೂ, ಸಿಖ್, ಜೈನ ಮತ್ತು ಬೌದ್ಧ ಸಮುದಾಯಗಳಿಗೆ ಸೇರಿದ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಜನರು ತಮ್ಮ ದೇಶಗಳಲ್ಲಿ ಕಿರುಕುಳ ಅನುಭವಿಸಿದ ನಂತರ ತಮ್ಮ ಧರ್ಮಗಳನ್ನು ರಕ್ಷಿಸಲು ಭಾರತಕ್ಕೆ ಬಂದಿದ್ದಾರೆ ಎಂದು ಹೇಳಿದರು.


ಮಮತಾ ಬ್ಯಾನರ್ಜಿ ಅವರು ತಮ್ಮ ಮತ ಬ್ಯಾಂಕ್ ರಕ್ಷಿಸಿಕೊಳ್ಳಲು ಕೆಲವು ಸಮುದಾಯಗಳನ್ನು ತಪ್ಪುದಾರಿಗೆ ಎಳೆಯುತ್ತಾರೆ ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದ್ದಾರೆ.

Join Whatsapp
Exit mobile version