ಮಮತಾ ಬ್ಯಾನರ್ಜಿಗೆ ನೈತಿಕ ಬೆಂಬಲದ ಅಗತ್ಯವಿದೆ, ನಾನು ಅವರ ಬೆಂಬಲಕ್ಕಿರುವೆ – ಹೆಚ್ ಡಿಕೆ

Prasthutha: March 11, 2021

ಬಂಗಾಳದಲ್ಲಿ ಅತ್ಯಂತ ಜನಪರ ಮತ್ತು ಸ್ವಚ್ಛ ಆಡಳಿತವನ್ನು ಮಮತಾ ಬ್ಯಾನರ್ಜಿ ನೀಡಿದ್ದಾರೆ. ಹೀಗಾಗಿ ಅವರಿಗೆ ಜನಬೆಂಬಲ ಅಪಾರವಾಗಿದೆ. ಎಂಥ ಶಕ್ತಿಯ ವಿರುದ್ಧ ಹೋರಾಡಿಯಾದರೂ ಬಂಗಾಳವನ್ನು ಗೆಲ್ಲುವ ಶಕ್ತಿ ಮಮತಾ ಅವರಿಗಿದೆ. ಈ ಚುನಾವಣೆಯನ್ನು ಅವರು ಗೆಲ್ಲುತ್ತಾರೆ ಕೂಡ. ಅವರಿಗೆ ಈಗ ನೈತಿಕ ಬೆಂಬಲ ನೀಡಬೇಕಿದೆ. ನಾನು ಅವರ ಬೆಂಬಲಕ್ಕಿರುವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲಿನ ಹಲ್ಲೆ ಘಟನೆ ತಿಳಿದು ಆಘಾತವಾಯ್ತು.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಲಿ.ಚುನಾವಣೆಗಳನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು.ಹಿಂಸೆಯಿಂದ ಅಲ್ಲ. ಘಟನೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು.ಚುನಾವಣಾ ವ್ಯವಸ್ಥೆಯನ್ನು ರಕ್ಷಿಸಬೇಕು ಎಂದಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!