Home ಟಾಪ್ ಸುದ್ದಿಗಳು ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ರಾಜೀನಾಮೆ ನೀಡಲು ಮುಂದಾದ ಮಮತಾ ಬ್ಯಾನರ್ಜಿ

ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ರಾಜೀನಾಮೆ ನೀಡಲು ಮುಂದಾದ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಆರ್ ಜಿ ಕರ್ ಆಸ್ಪತ್ರೆಯ ವೈದ್ಯೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಾ ನಿರತ ವೈದ್ಯರನ್ನು ಭೇಟಿಯಾಗಲು ಬಂದಿದ್ದ ಮಮತಾ ಬ್ಯಾನರ್ಜಿ, ಕೊಲೆಯಾದ ವೈದ್ಯರಿಗೆ ನ್ಯಾಯ ಕೊಡಿಸಲು ನಾನು ಸಿಎಂ ಪದವಿಯನ್ನು ತ್ಯಜಿಸಲು ಕೂಡ ಸಿದ್ಧಳಿದ್ದೇನೆ ಎಂದು ಈ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.


ನನ್ನ ರಾಜೀನಾಮೆಯಿಂದ ಸಾಮಾನ್ಯ ಜನರಿಗೆ ನ್ಯಾಯ ಸಿಗುತ್ತದೆ ಎಂದರೆ ನಾನು ಅದಕ್ಕೂ ಸಿದ್ಧಳಿದ್ದೇನೆ. ಆದರೆ, ಪ್ರತಿಭಟನಾನಿರತರಿಗೆ ನ್ಯಾಯ ಬೇಕಾಗಿಲ್ಲ, ಬದಲಾಗಿ ನನ್ನ ಕುರ್ಚಿಯಷ್ಟೇ ಬೇಕಾಗಿದೆ ಎಂದಿದ್ದಾರೆ.


ಪ್ರತಿಭಟನಾನಿರತ ವೈದ್ಯರನ್ನು ಭೇಟಿ ಮಾಡಲು ರಾಜ್ಯ ಸಚಿವಾಲಯದಲ್ಲಿ 2 ಗಂಟೆಗಳ ಕಾಲ ಕಾದಿದ್ದೇನೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆರ್ಜಿ ಕರ್ ಆಸ್ಪತ್ರೆ ವೈದ್ಯರ ಕೊಲೆ ಪ್ರಕರಣದಲ್ಲಿ ಜನರಿಗೆ ಅನುಕೂಲವಾಗುವುದಾದರೆ ಮತ್ತು ನ್ಯಾಯ ಸಿಗುತ್ತದೆ ಎಂದಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.


“ಆರ್ ಜಿ ಕರ್ ಆಸ್ಪತ್ರೆಯ ಬಿಕ್ಕಟ್ಟಿಗೆ ಇಂದು ಅಂತ್ಯವನ್ನು ನಿರೀಕ್ಷಿಸಿದ್ದ ಪಶ್ಚಿಮ ಬಂಗಾಳದ ಜನರಲ್ಲಿ ನಾನು ಕ್ಷಮೆ ಯಾಚಿಸುತ್ತೇನೆ. ಪ್ರತಿಭಟನಾನಿರತ ವೈದ್ಯರು ನನ್ನ ಬಳಿಗೆ ಬಂದರು. ಆದರೆ ಸಭೆಗೆ ಕುಳಿತುಕೊಳ್ಳಲಿಲ್ಲ. ಕೆಲಸಕ್ಕೆ ಹಿಂತಿರುಗಲು ನಾನು ಅವರನ್ನು ವಿನಂತಿಸುತ್ತೇನೆ” ಎಂದು ಮಮತಾ ಬ್ಯಾನರ್ಜಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

Join Whatsapp
Exit mobile version