Home ಟಾಪ್ ಸುದ್ದಿಗಳು ಬಾಂಗ್ಲಾ ಹಿಂಸಾಚಾರ | ನಿರಾಶ್ರಿತರಿಗೆ ಆಶ್ರಯ ಒದಗಿಸಲು ತಮ್ಮ ಸರ್ಕಾರ ಸಿದ್ಧ: ಮಮತಾ ಬ್ಯಾನರ್ಜಿ

ಬಾಂಗ್ಲಾ ಹಿಂಸಾಚಾರ | ನಿರಾಶ್ರಿತರಿಗೆ ಆಶ್ರಯ ಒದಗಿಸಲು ತಮ್ಮ ಸರ್ಕಾರ ಸಿದ್ಧ: ಮಮತಾ ಬ್ಯಾನರ್ಜಿ

ಕೋಲ್ಕತಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯಿಂದ ತೊಂದರೆಗೆ ಸಿಲುಕಿದವರು ಬಂದು ನಮ್ಮ ಸಹಾಯ ಕೇಳಿದರೆ ಅವರಿಗೆ ಆಶ್ರಯ ಒದಗಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಟಿಎಂಸಿಯ `ಹುತಾತ್ಮರ ದಿನ’ ರ್‍ಯಾಲಿಯಲ್ಲಿ ಅವರು ಮಾತನಾಡಿ, ಬಾಂಗ್ಲಾದ ಅಕ್ರಮ ವಲಸಿಗರಿಗೆ ಪಶ್ಚಿಮ ಬಂಗಾಳ ಸರ್ಕಾರ ಆಶ್ರಯ ನೀಡಿ, ಐಡಿ ಕಾರ್ಡ್‍ಗಳನ್ನು ಕೊಡಿಸಲು ನೆರವಾಗುತ್ತಿದೆ ಎಂಬ ಆರೋಪಗಳ ನಡುವೆ ಮಮತಾ ಬ್ಯಾನರ್ಜಿಯವರು ಹಿಂಸಾಚಾರದ ಸಂತ್ರಸ್ತರಿಗೆ ಆಶ್ರಯದ ಆಹ್ವಾನ ನೀಡಿದ್ದಾರೆ.

Join Whatsapp
Exit mobile version