ಕೊಲ್ಕತಾ : ಟ್ವಿಟರ್ ಅನ್ನು ನಿಯಂತ್ರಿಸಲು ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪಾದಿಸಿದ್ದಾರೆ. ಟ್ವಿಟರ್ ಮೇಲೆ ಪ್ರಭಾವ ಬೀರುವಲ್ಲಿ ವಿಫಲವಾಗಿರುವುದರಿಂದ, ಅದನ್ನು ನೆಲಸಮ ಮಾಡಲು ಬ್ಯಾನರ್ಜಿ ಹೇಳಿದ್ದಾರೆ.
ಇದೇ ರೀತಿ ತನ್ನ ಸರಕಾರದ ಜೊತೆಗೂ ನಡೆದುಕೊಳ್ಳಲಾಗುತ್ತಿದೆ ಎಂದು ಕೇಂದ್ರದ ವಿರುದ್ಧ ಅವರು ವಾಗ್ದಾಳಿ ಮಾಡಿದ್ದಾರೆ.
“ನಾನು ಇದನ್ನು ಖಂಡಿಸುತ್ತೇನೆ. ಅವರು ಟ್ವಿಟರ್ ಅನ್ನು ನಿಯಂತ್ರಿಸಲು ಸಾಧ್ಯವಿಲ್ಲ, ಹೀಗಾಗಿ ಅದನ್ನು ನೆಲಸಮ ಮಾಡಲು ಯತ್ನಿಸುತ್ತಿದ್ದಾರೆ. ತಮ್ಮಿಂದ ನಿಯಂತ್ರಿಸಲು ಸಾಧ್ಯವಾಗದ ಎಲ್ಲರೊಂದಿಗೆ ಅವರು ಇದೇ ರೀತಿ ವರ್ತಿಸುತ್ತಿದ್ದಾರೆ. ಅವರು ನನ್ನನ್ನು ನಿಯಂತ್ರಿಸಲು ಸಾಧ್ಯವಿಲ್ಲ ಮತ್ತು ಅದಕ್ಕಾಗಿ ಅವರು ನನ್ನ ಸರಕಾರವನ್ನು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ” ಎಂದು ಬ್ಯಾನರ್ಜಿ ಹೇಳಿದ್ದಾರೆ.
ಹೊಸ ಐಟಿ ನಿಯಮಗಳಿಗೆ ಒಳಗೊಳಪಡಲು ಪ್ರಧಾನಿ ಮೋದಿ ಸರಕಾರ ಟ್ವಿಟರ್ ಸೇರಿದಂತೆ ಸೋಶಿಯಲ್ ಮೀಡಿಯಾ ಕಂಪೆನಿಗಳ ಮೇಲೆ ಒತ್ತಡ ಬೀರುತ್ತಿರುವುದು ಕಂಡುಬರುತ್ತಿದೆ.