ಪಾರ್ಲಿಮೆಂಟ್ ಅಧಿವೇಶನಕ್ಕೆ ಪ್ರತಿಪಕ್ಷಗಳ ಕಾರ್ಯತಂತ್ರ: ದೆಹಲಿಗೆ ದೌಡಾಯಿಸಿದ ಮಮತಾ ಬ್ಯಾನರ್ಜಿ

Prasthutha|

ನವದೆಹಲಿ: ನವೆಂಬರ್ 29 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಈ ಕುರಿತು ಪ್ರತಿಪಕ್ಷಗಳ ಕಾರ್ಯತಂತ್ರಗಳ ಬಗ್ಗೆ ವಿರೋಧ ಪಕ್ಷಗಳೊಂದಿಗೆ ಚರ್ಚಿಸುವ ನಿಟ್ಟಿನಲ್ಲಿ ಈ ತಿಂಗಳ 22 – 25 ರ ನಡುವೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ದೆಹಲಿಗೆ ಭೇಟಿ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ.

- Advertisement -

ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಮುಖಂಡರನ್ನು ಭೇಟಿಯಾಗಿ ಅಧಿವೇಶನದಲ್ಲಿ ಆಡಳಿತರೂಢ ಬಿಜೆಪಿಯನ್ನು ಎದುರಿಸಲು ಕಾರ್ಯತಂತ್ರ ಹೆಣೆಯುವ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ. ಅದರಲ್ಲೂ ವಿಶೇಷವಾಗಿ ಕೃಷಿ ಕಾಯ್ದೆಗಳನ್ನು ರದ್ದತಿಯ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುವ ಸಾಧ್ಯತೆಯಿದೆ.

ಕೇಂದ್ರ ಸರ್ಕಾರ ನೂತನ ಮೂರು ಕೃಷಿ ಕಾಯ್ದೆಗಳನ್ನು ಸಂಸತ್ತಿನಲ್ಲಿ ಅಂಗೀಕರಿಸುವ ಮೂಲಕ ದೇಶಾದ್ಯಂತ ರೈತರಿಂದ ಒಂದು ವರ್ಷದ ಕಾಲದ ತೀವ್ರ ಪ್ರತಿಭಟನೆ ಎದುರಿಸಿತ್ತು. ಮಾತ್ರವಲ್ಲ ರೈತರ ಆಂದೋಲನಕ್ಕೆ ಮಣಿದ ಪ್ರಧಾನಿ ಮೋದಿ ನೇತೃತ್ವದ ಮೋದಿ ಸರ್ಕಾರ ಕಾಯ್ದೆಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಪ್ರಕಟಿಸಿತ್ತು.

- Advertisement -

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ನಿರ್ಧಾರ ಘೋಷಿಸುತ್ತಿದ್ದಂತೆ ರೈತರನ್ನೊಳರನ್ನೊಳಗೊಂಡಂತೆ ದೇಶದ್ಯಾಂತ ಜನರು ಸಂಭ್ರಮಾಚರಣೆ ನಡೆಸಿದ್ದರು. ಮಾತ್ರವಲ್ಲ ರಾಜಕೀಯ ಪಕ್ಷ, ಸಂಘಸಂಸ್ಥೆ ಗಳು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದರು.

ಕಳೆದ ಜುಲೈನಲ್ಲಿ ದೆಹಲಿಗೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ, ವಿರೋಧ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಬಿಜೆಪಿಯನ್ನು ದೇಶದೆಲ್ಲೆಡೆ ಸೋಲಿಸುವ ನಿಟ್ಟಿನಲ್ಲಿ ಒಟ್ಟಾಗಿ ಚುನಾವಣೆಯನ್ನು ಎದುರಿಸುವಂತೆ ಮನವೊಲಿಸಿದ್ದರು. ಮಾತ್ರವಲ್ಲ ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅದ್ಭುತ ಜಯ ಸಾಧಿಸಿದ ಬಳಿಕ ರಾಷ್ಟ್ರ ರಾಜಧಾನಿಗೆ ಅವರ ಮೊದಲ ಭೇಟಿಯಾಗಿದೆ.

ಸದ್ಯ 2024 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಐಕ್ಯರಾಗಿ ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ದೇಶದೆಲ್ಲೆಡೆ ಸಂಚರಿಸಿ ಪ್ರತಿಪಕ್ಷವನ್ನು ತಯಾರಿಸುತ್ತಿರುವುದು ಉತ್ತಮ ಬೆಳವಣಿಗೆಯೆಂದೇ ವಿಶ್ಲೇಷಿಸಲಾಗುತ್ತಿದೆ.

Join Whatsapp