Home ಟಾಪ್ ಸುದ್ದಿಗಳು ನಾಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ – ಮಮತ ಬ್ಯಾನರ್ಜಿ ಮಹತ್ವದ ಭೇಟಿ

ನಾಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ – ಮಮತ ಬ್ಯಾನರ್ಜಿ ಮಹತ್ವದ ಭೇಟಿ

ನವದೆಹಲಿ ಜುಲೈ 27: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ರಾಷ್ಟ್ರ ರಾಜಧಾನಿಯಲ್ಲಿ ಭೇಟಿಯಾಗಲಿದ್ದಾರೆಂದು ಮೂಲಗಳು ವರದಿ ಮಾಡಿದೆ.

ಈ ವರ್ಷದ ಮೇ ತಿಂಗಳಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಜಯಗಳಿಸಿದ ನಂತರ ಉಭಯ ನಾಯಕರ ಮೊದಲ ಭೇಟಿ ಇದಾಗಿದ್ದು, ಬುಧವಾರ ಅಪರಾಹ್ನ ಪರಸ್ಪರ ಭೇಟಿಯಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಚರ್ಚೆ ನಡೆಸುವ ಸಾದ್ಯತೆಯಿದೆ. ಕಾಂಗ್ರೆಸ್ ಮತ್ತು ತೃಣಮೂಲ ಸಂಬಂಧವು ಪ್ರಕ್ಷುಬ್ಧವಾಗಿದ್ದರೂ ಸಹ ಮಮತಾ ಬ್ಯಾನರ್ಜಿ ಮತ್ತು ಸೋನಿಯಾ ಗಾಂಧಿ ವಯಕ್ತಿತವಾಗಿ ಉತ್ತಮ ಸಂಬಂಧವನ್ನು ಹೊಂದಿದ್ದಾರೆ.

ಉಭಯ ನಾಯಕರ ಭೇಟಿ ವೇಳೆಯಲ್ಲಿ ನಿಗದಿತ ಅಜೆಂಡಾ ಒಳಗೊಳ್ಳದಿದ್ದರೂ 3 ವರ್ಷಗಳ ನಂತರ ದೇಶದಾಧ್ಯಂತ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷಗಳ ಕಾರ್ಯತಂತ್ರ , ಪ್ರಸಕ್ತ ರಾಷ್ಟ್ರ ರಾಜಕೀಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳಾದ ಪೆಗಾಸಸ್ ಕಣ್ಗಾವಲು ಮತ್ತು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುವ ಕುರಿತು ಸಂಸತ್ತಿನ ಅಧಿವೇಶನದಲ್ಲಿ ನಡೆಯುತ್ತಿರುವ ಬೆಳವಣಿಗೆಯ ವೇಳೆಯಲ್ಲಿ ಮಮತಾ – ಸೋನಿಯಾ ಅವರ ಭೇಟಿ ಮಹತ್ವ ಪಡೆದಿದೆ.

ಸೋಮವಾರ ಸಂಜೆ ದೆಹಲಿ ತಲುಪಿರುವ ಮಮತಾ ಬ್ಯಾನರ್ಜಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್, ಕಾಂಗ್ರೆಸ್ ಹಿರಿಯ ಮುಖಂಡ ಆನಂದ್ ಶರ್ಮಾ, ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಗ್ವಿ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಲೋಕಸಭಾ ಸ್ಪೀಕರ್ ಓಮ್ ಬಿರ್ಲಾ ಸೇರಿದಂತೆ ಹಲವಾರು ಗಣ್ಯರನ್ನು ಬೇಟಿ ಮಹತ್ವದ ರಾಜಕೀಯ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಏಳು ಬಾರಿ ಸಂಸದರಾಗಿರುವ ಮಮತಾ ಬ್ಯಾನರ್ಜಿ ಯವರು ಕೋವಿಡ್ ಹಿನ್ನೆಲೆಯಲ್ಲಿ ಸಂಸತ್ ಭವವನ ಸಂದರ್ಶವನ್ನು ರದ್ದುಪಡಿಸಿದ್ದಾರೆ.

Join Whatsapp
Exit mobile version