ಭವಾನಿಪುರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿ : ಸಿಎಂ ಸ್ಥಾನ ಭದ್ರ

Prasthutha|

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ತಿಬ್ರೆವಾಲಾ ವಿರುದ್ಧ 58 ಸಾವಿರಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.

- Advertisement -

ಕಳೆದ ಗುರುವಾರ ಮತದಾನ ನಡೆದಿದ್ದು, ಶೇ 57ರಷ್ಟು ಮಾತ್ರ ಮತದಾನ ನಡೆದಿದೆ. ರಾಷ್ಟ್ರದ ಗಮನ ಸೆಳೆದಿರುವ ಈ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ವಕೀಲೆ, ಬಿಜೆಪಿ ಯೂತ್​​ ವಿಂಗ್​​​ ಅಧ್ಯಕ್ಷೆಯಾಗಿದ್ದ ಪ್ರಿಯಾಂಕಾ ತಿಬ್ರೆವಾಲಾ ಕಣದಲ್ಲಿದ್ದರು.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. 2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿಯೂ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು.

Join Whatsapp