ನಂದಿಗ್ರಾಮ ಚುನಾವಣಾ ಫಲಿತಾಂಶ | ಮಮತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂನ್ 24ಕ್ಕೆ ಮುಂದೂಡಿಕೆ

Prasthutha: June 18, 2021

ಕೋಲ್ಕತ್ತ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಪ್ರತಿಸ್ಪರ್ಧಿ ಬಿಜೆಪಿಯ ಸುವೇಂದು ಅಧಿಕಾರಿ ಗೆಲುವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋಲ್ಕತ್ತ ಹೈಕೋರ್ಟ್ ಜೂನ್ 24ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಕೌಶಿಕ್‌ ಚಂದ ನೇತೃತ್ವದ ನ್ಯಾಯಪೀಠವು ಇಂದು ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡು ಅರ್ಜಿಯ ವಿಚಾರಣೆಯನ್ನು ಜೂನ್24 ಗುರುವಾರದಂದು ಮತ್ತೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದೆ.

‘ಚುನಾವಣಾ ಫಲಿತಾಂಶದಲ್ಲಿ EVMಗಳ ದುರ್ಬಳಕೆ ಮಾಡಲಾಗಿದ್ದು, ಮತಗಳ ಮರು ಎಣಿಕೆ ಮಾಡಬೇಕೆಂಬ ನನ್ನ ಮನವಿಯನ್ನು ಚುನಾವಣಾ ಆಯೋಗವು ತಿರಸ್ಕರಿಸಿದೆ’ ಎಂದು ಮಮತಾ ಬ್ಯಾನರ್ಜಿ ಅವರು ಅರ್ಜಿಯಲ್ಲಿ ಆರೋಪಿಸಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ