2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬೆಂಬಲ: ಮಮತಾ ಬ್ಯಾನರ್ಜಿ

Prasthutha|

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷವು 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

- Advertisement -

ಕಾಂಗ್ರೆಸ್ ಎಲ್ಲೆಲ್ಲಿ ಪ್ರಬಲವಾಗಿದೆಯೋ ಅಲ್ಲಿ ಅವರು ಹೋರಾಡಲಿ, ನಾವು ಅವರನ್ನು ಬೆಂಬಲಿಸುತ್ತೇವೆ, ಅದರಲ್ಲಿ ಯಾವುದೇ ಸಂಶಯ ಬೇಡ. ಆದರೆ ಅವರು ಇತರ ರಾಜಕೀಯ ಪಕ್ಷಗಳನ್ನೂ ಬೆಂಬಲಿಸಬೇಕು. ಬೆಂಬಲ ಪಡೆಯಬೇಕಾದರೆ ಕಾಂಗ್ರೆಸ್ ಇತರ ಪಕ್ಷಗಳನ್ನೂ ಬೆಂಬಲಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ನಿರ್ದಿಷ್ಟ ಪ್ರದೇಶದಲ್ಲಿ ಪ್ರಬಲವಾಗಿರುವ ಪಕ್ಷಗಳು ಒಟ್ಟಾಗಿ ಹೋರಾಡಬೇಕು. ನಾನು ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಿದ್ದೇನೆ, ಆದರೆ ಬಂಗಾಳದಲ್ಲಿ ನನ್ನ ವಿರುದ್ಧ ಬರಬಾರದು ಎಂದರು. 2024 ರ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುವ ಕುರಿತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ನನ್ನನ್ನು ಬೆಂಬಲಿಸಿದರೆ ಬೇರೆ ಕಡೆಗಳಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಲು ಸಿದ್ಧ ಎಂದು ಹೇಳಿದರು.

- Advertisement -

ಎಲ್ಲೆಲ್ಲಿ ಕಾಂಗ್ರೆಸ್ ತನ್ನದೇ ಆದ 200 ಸ್ಥಾನಗಳಲ್ಲಿ ಪ್ರಬಲವಾಗಿದೆಯೋ ಅಲ್ಲಿ ಅವರು ಹೋರಾಡಲಿ, ನಾವು ಅವರನ್ನು ಬೆಂಬಲಿಸುತ್ತೇವೆ. ಆದರೆ ಅವರು ಇತರ ರಾಜಕೀಯ ಪಕ್ಷಗಳಿಗೂ ಬೆಂಬಲ ನೀಡಬೇಕು. ಒಳ್ಳೆಯದನ್ನು ಸಾಧಿಸಬೇಕಾದರೆ ಕೆಲವು ಕ್ಷೇತ್ರಗಳಲ್ಲಿ ತ್ಯಾಗ ಮಾಡಬೇಕಾಗುತ್ತದೆ ಎಂದರು.

Join Whatsapp