ಭ್ರಷ್ಟಾಚಾರ ಆರೋಪ । ಸುವೇಂದು ಅಧಿಕಾರಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ದೀದಿ

Prasthutha|

ಪಶ್ಚಿಮ ಬಂಗಾಳದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ದ ಉಂಟಾದ ಸೋಲನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಸುವೇಂದು ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇಂದು ಕೋರ್ಟ್ ಇದರ ವಿಚಾರಣೆ ನಡೆಸಲಿದೆ.

- Advertisement -

ಸುವೇಂದು ಅಧಿಕಾರಿ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಕೇವಲ 200ಕ್ಕೂ ಕಡಿಮೆ ಅಂತರದಲ್ಲಿ ಜಯ ಗಳಿಸಿದ್ದರು. ಇದನ್ನು ಪ್ರಶ್ನಿಸಿರುವ ಮಮತಾ ಬ್ಯಾನರ್ಜಿ ಅವರು, ಸುವೇಂದು ವಿರುದ್ದ ಹಣ ಹಂಚಿಕೆ, ಭ್ರಷ್ಟಾಚಾರ ಸೇರಿದಂತೆ ದ್ವೇಷ ಹಾಗೂ ಧರ್ಮದ ಆಧಾರದ ಮೇಲೆ ಆರೋಪಗಳನ್ನು ಮಾಡಿ ಕೋರ್ಟ್‌‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಮತ ಎಣಿಕೆ ಪ್ರಕ್ರಿಯೆ ಅಂತ್ಯವಾದ ಬಳಿಕ ದೀದಿ ಮರು ಎಣಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು, ಆದರೆ ಆಯೋಗ ದೀದಿಯ ಮನವಿಯನ್ನು ತಿರಸ್ಕರಿಸಿತ್ತು. ಸುವೇಂದು ಅಧಿಕಾರಿಯ ವಿರುದ್ಧ ಆರೋಪಿಸಿರುವ ದೀದಿ, ಸುವೇಂದು ಹಲವು ಭ್ರಷ್ಟಾಚಾರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಾಗಾಗಿ ಇದು ಅವರ ಗೆಲುವಿನ ಅವಕಾಶಗಳನ್ನು ಹೆಚ್ಚಿಸಿದೆ ಎಂದಿದ್ದಾರೆ.

- Advertisement -

ಇದಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಹಿಂದೆ ಪ್ರಕರಣವನ್ನು ದಾಖಲಿಸಲಾಗಿದ್ದು, ಈ ಬಗ್ಗೆ ಇಂದು ನ್ಯಾಯಮೂರ್ತಿ ಕೌಸಿಕ್ ಚಂದಾ ಅವರು ವಿಚಾರಣೆ ನಡೆಸಲಿದ್ದಾರೆ.



Join Whatsapp