ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೇಶದ ಪ್ರಧಾನಿಯಾಗುವ ಅರ್ಹತೆ ಇದೆ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಡಾ. ಅಮರ್ತ್ಯ ಸೇನ್ ಹೇಳಿದ್ದಾರೆ.
ಸಂದರ್ಶನದಲ್ಲಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿಯವರಿಗೆ ದೇಶದ ಪ್ರಧಾನಿಯಾಗುವ ಎಲ್ಲಾ ಅರ್ಹತೆಯೂ ಇದೆ. ಇತರೆಲ್ಲಾ ಪಕ್ಷಗಳನ್ನು ತಮ್ಮೊಂದಿಗೆ ಒಗ್ಗೂಡಿಸಿಕೊಂಡು ಮುನ್ನಡೆಯುವ ಸಾಮರ್ಥ್ಯವೂ ಅವರಲ್ಲಿದೆ. ಆದರೆ ಅವರು ಅದನ್ನು ಸಾಬೀತುಪಡಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಮಾತ್ರ ಲಾಭವಾಗಲಿದೆ ಎಂಬ ಅಭಿಪ್ರಾಯ ತಪ್ಪು. ಡಿಎಂಕೆ, ಟಿಎಂಸಿ, ಎಸ್ ಪಿ ಸೇರಿದಂತೆ ಪ್ರಾದೇಶಿಕ ಪಕ್ಷಗಳು ಚುನಾವಣೆಗೆ ಈಗಿಂದಲೇ ಶಕ್ತಿ ಮೀರಿ ಪ್ರಯತ್ನ ನಡೆಸಬೇಕು ಎಂದರು.