ದೇಶದ ಹೆಸರೇ ಮೋದಿ ಎಂದು ಬದಲಾಗಲಿದೆ : ಮಮತಾ ವ್ಯಂಗ್ಯ

Prasthutha: March 8, 2021

ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ನೀಡುವ ಪ್ರಮಾಣ ಪತ್ರದಲ್ಲೂ ಪ್ರಧಾನಿ ಮೋದಿಯವರ ಚಿತ್ರ ಪ್ರಕಟಿಸಿರುವುದಕ್ಕೆ ಆಕ್ರೋಶಗೊಂಡ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ” ಇನ್ನು ದೇಶದ ಹೆಸರನ್ನೂ ನರೇಂದ್ರ ಮೋದಿ ಎಂಬುದಾಗಿ ಬದಲಿಸುತ್ತಾರೆ, ಆ ದಿನಗಳು ತುಂಬಾ ದೂರವೇನೂ ಇಲ್ಲ ” ಎಂದು ಕಿಡಿಕಾಡಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತಾಡಿದ ಮಮತಾ’ಕ್ರೀಡಾಂಗಣಕ್ಕೆ ಅವರ ಹೆಸರು ನಾಮಕರಣ ಮಾಡಲಾಗಿದೆ,ಕೋವಿಡ್ ಲಸಿಕೆ, ಪ್ರಮಾಣಪತ್ರ,ಪೆಟ್ರೋಲ್ ಬಂಕ್ ಹೀಗೆ ಎಲ್ಲೆಲ್ಲೂ ಅವರದೇ ಚಿತ್ರ ರಾರಾಜಿಸುತ್ತಿದೆ. ಮುಂದೆ ಮೋದಿಯ ಹೆಸರು ದೇಶಕ್ಕೆ ಇಟ್ಟರೂ ಅಚ್ಚರಿಯೇನೂ ಇಲ್ಲ ” ಎಂದು ವ್ಯಂಗ್ಯವಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಅಸುರಕ್ಷಿತರು ಎಂದು ಪ್ರಧಾನಿ ಮೋದಿಯವರು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮಮತಾ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಹಿಳೆಯರು ಸುರಕ್ಷಿತರಾಗಿದ್ದಾರೆಯೇ? ಪ್ರಧಾನಿಯವರ ತವರು ರಾಜ್ಯದಲ್ಲಿ ಮಹಿಳೆಯರ ದುಸ್ಥಿತಿ ಬಗ್ಗೆ ಮೋದಿಯವರು ಮೊದಲು ತಿಳಿದುಕೊಳ್ಳಲಿ ” ಎಂದು ಟೀಕಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!