ಮಂಗಳೂರು: ನಗರದ ಬಲ್ಮಠ ಪ್ರದೇಶದಲ್ಲಿ ಕಾಮಗಾರಿ ವೇಳೆ ಭೂಕುಸಿತಗೊಂಡು ಮಣ್ಣಿನಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದಾರೆ.
ಚಂದನ್ ಕುಮಾರ್ ಮೃತ ಕಾರ್ಮಿಕ. ಮೂಲತಃ ಉತ್ತರ ಪ್ರದೇಶ ಮೂಲದವರು.
ಸತತ ಆರೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಂದನ್ ಕುಮಾರ್ನನ್ನು ಹೊರತೆಗೆಯಲು ರಕ್ಷಣಾ ತಂಡ ಹರಸಾಹಸ ಪಟ್ಟಿತ್ತು. ಆದರೆ ರಾಡ್, ಮಣ್ಣು, ಹಲಗೆಯ ನಡುವೆ ಸಿಲುಕಿಕೊಂಡಿದ್ದರಿಂದ ಕಾರ್ಮಿಕ ಅಷ್ಟರಲ್ಲಿ ಉಸಿರು ಚೆಲ್ಲಿದ್ದಾರೆ.