ಮಥುರಾ: ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ವ್ಯಕ್ತಿ ಸೇರಿ 15 ಜಾನುವಾರುಗಳು ಬಲಿಯಾಗಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಕೊಳದಲ್ಲಿ ವ್ಯಕ್ತಿಯೋರ್ವ ತನ್ನ ಜಾನುವಾರುಗಳನ್ನು ತೊಳೆಯುತ್ತಿದ್ದಾಗ ಹೈವೋಲ್ಟ್ ತಂತಿಯಿಂದ ಹರಿದ ವಿದ್ಯುತ್ ಪ್ರವಾಹದಿಂದಾಗಿ ಈ ದುರ್ಘಟನೆ ನಡೆದಿದೆಯೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಯುಪಿಯ ಚಿತೆರಿ ಗ್ರಾಮದ ಕುಂದರ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಇಮ್ರಾತ್ ಅಲಿ ಎಂದು ಗುರಿತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಸಂದೀಪ್ ಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ವಿದ್ಯುತ್ ಆಘಾತಕ್ಕೊಳಗಾದ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಅಸುನೀಗಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಪೊಲೀಸರು ತಿಳಿಸಿದ್ದಾರೆ.
ಆಕ್ರೋಶಿತ ಜನರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಜಮಾವಣೆಗೊಂಡು ವಿದ್ಯುತ್ ಇಲಾಖೆಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಪಟ್ಟುಹಿಡಿದರು. ಪೊಲೀಸರು ಇಲಾಖೆಯ ವಿರುದ್ಧ ಸೂಕ್ತ ಕ್ರಮ ಜರುಗಿಸುವ ಭರವಸೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.