ಪೊಲೀಸರಿಂದ ಹಲ್ಲೆ ಆರೋಪ, ವಿಷ ಕುಡಿದ ಯುವಕ

Prasthutha|

ಶಿವಮೊಗ್ಗ: ಶಾಲೆಯೊಂದರ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.


ಯುವಕನನ್ನುಅರಶಿಣಗೇರಿಯ ಸಚಿನ್ ಎಂದು ಗುರುತಿಸಲಾಗಿದೆ. ಸದ್ಯ ಯುವಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟರೂ ತೆಗೆದುಕೊಳ್ಳುತ್ತಿಲ್ಲ ಎಂದು ಸಂತ್ರಸ್ತ ಯುವಕನ ಕುಟುಂಬ ಆರೋಪಿಸಿದೆ.

- Advertisement -


ಎರಡು ದಿನಗಳ ಹಿಂದೆ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ನೋಡಲು ಸ್ಥಳೀಯ ನಿವಾಸಿ ಸಚಿನ್ ಹಾಗೂ ಸ್ನೇಹಿತರು ತೆರಳಿದ್ದರು. ಈ ವೇಳೆ ಪೊಲೀಸರು ಹಲ್ಲೆ ನಡೆಸಿದ್ದಾರೆ.

ಈ ವೇಳೆ ಗ್ರಾಮಸ್ಥರು ಹಲ್ಲೆ ಮಾಡಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಇದರ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ನಡುವೆ ಊರಿನವರ ಮುಂದೆ ಹೊಡೆದುದುದಿದ್ದರಿಂದ ಅವಮಾನ ಆಗಿದೆ ಎಂದು ಸಚಿನ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

- Advertisement -