ಸುಳ್ಳು ಪ್ರಕರಣದಲ್ಲಿ ಆಟಿಕೆ ಮಾರಾಟಗಾರನನ್ನು ಬಂಧಿಸಿದ ಮಧ್ಯಪ್ರದೇಶ ಪೊಲೀಸರು

Prasthutha|

ಬೋಪಾಲ್: ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಸಿರೋಂಜ್ ಎಂಬಲ್ಲಿ ಮುಸ್ತಫಿಸ್ ಖಾನ್ ಎಂಬಾತ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದನು. ಆದರೆ ಪೋಲಿಸರು ಕಥೆಯನ್ನು ತಿರುಚಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ ಎಂದು ಕುಟುಂಬದ ಮೂಲಗಳು ಆರೋಪಿಸಿದೆ.

- Advertisement -

ಘಟನೆಗೆ ಸಂಬಂಧಿಸಿದಂತೆ ನೇಹಾ ಖಾನ್ ಎಂಬ ಮಹಿಳೆ ನನ್ನ ಪತಿಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿ ಪೊಲೀಸರು ಬಂಧಿಸಿದ್ದಾರೆ. ಈ ನಿಟ್ಟಿನಲ್ಲಿ ಪತಿಗೆ ನ್ಯಾಯ ದೊರಕಿಸಿಕೊಡುವಂತೆ ಉನ್ನತ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಮಾತ್ರವಲ್ಲ ಈ ಪ್ರಕರಣದಲ್ಲಿ ನ್ಯಾಯಯುತವಾದ ತನಿಖೆ ನಡೆಸುವಂತೆ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಅವರಲ್ಲಿ ಮನವಿ ಮಾಡಿದ್ದಾರೆ.

ಆಕ್ಷೇಪಾರ್ಹ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದಲ್ಲಿ ನನ್ನ ಪತಿಯನ್ನು ಆಗಸ್ಟ್ 31 ರಂದು ಬಂಧಿಸಲಾಗಿತ್ತು. ಈ ಕುರಿತು ವಿಚಾರಿಸಲು ಮರುದಿನ ಬೆಳಿಗ್ಗೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದಾಗ ಆತನನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದೆಂದು ತಿಳಿಸಿದ್ದಾರೆ. ಆದರೆ ಈ ವರೆಗೆ ಆತನನ್ನು ಬಿಡುಗಡೆ ಮಾಡಿಲ್ಲ ಎಂದು ದೂರಿದರು. ಪ್ರಸಕ್ತ ನನ್ನ ಪತಿಯನ್ನು ನ್ಯಾಯಾಯಲಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ವಕೀಲರನ್ನು ಸಂಪರ್ಕಿಸಿದಾಗ ಆತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

- Advertisement -

ನನ್ನ ಪತಿಯ ಕಿರಿಯ ಸಹೋದರ ಅಫ್ತಾಬ್ ಖಾನ್ ನಿವಾಸದಿಂದ ಬಂಧಿಸಲಾಗಿತ್ತು. ಆದರೆ ಎಫ್.ಐ.ಆರ್ ಪ್ರತಿಯಲ್ಲಿ ಪೊಲೀಸರು ಆತನನ್ನು ಬಸ್ ನಿಲ್ದಾಣದಿಂದ ಬಂಧಿಸಲಾಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ನೆಹಾ ಖಾನ್ ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ವರಿಷ್ಠಾಧಿಕಾರಿ ಮೋನಿಕಾ ಶುಕ್ಲಾ ಆತನ ಕುಟುಂಬದ ಸದಸ್ಯರು ಘಟನೆಗೆ ಸಂಬಂಧಿಸಿದಂತೆ ನನ್ನನ್ನು ಈ ವರೆಗೆ ಸಂಪರ್ಕ ನಡೆಸಿಲ್ಲ. ಮಾತ್ರವಲ್ಲ ಕುಟುಂಬದ ಆರೋಪದ ಬಗ್ಗೆ ತಲೆಗೆಡಿಸುವುದಿಲ್ಲ. ಈ ಸಂಬಂಧ ಆತನ ಕುಟುಂಬ ನನ್ನನ್ನು ಸಂಪರ್ಕಿಸಿದರೆ ಈ ಬಗ್ಗೆ ತನಿಖೆ ನಡೆಸುತ್ತೇನೆ ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.



Join Whatsapp