Home ಟಾಪ್ ಸುದ್ದಿಗಳು ಕ್ರೀಡೆ ಕಳಿಸುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಹಳೆ ವಿದ್ಯಾರ್ಥಿ ದೌರ್ಜನ್ಯ: ಯುವಕ ಅರೆಸ್ಟ್

ಕ್ರೀಡೆ ಕಳಿಸುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಹಳೆ ವಿದ್ಯಾರ್ಥಿ ದೌರ್ಜನ್ಯ: ಯುವಕ ಅರೆಸ್ಟ್

ಮಂಡ್ಯ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಶಾಲೆಯ ಹಳೆಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.

ಯೋಗಿ ಎಂಬ ಹಳೇ ವಿದ್ಯಾರ್ಥಿ ತನ್ನ ಶಾಲೆಯ ಮಕ್ಕಳಿಗೆ ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಮಕ್ಕಳನ್ನು ಬಳಸಿಕೊಂಡು ಹೀನ ಕೃತ್ಯ ಎಸಗಿದ್ದಾನೆ. ಅಣ್ಣನಂತೆ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯರ ನಗ್ನ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡಿದ್ದಾನೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮೇಲುಕೋಟೆ ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರೌಢ ಶಾಲೆಯೊಂದರ ಹಲವು ಅಪ್ರಾಪ್ತ ಬಾಲಕಿಯರಿಗೆ ಆರೋಪಿ ಯೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಸದ್ಯ ನೊಂದ ನಾಲ್ವರು ಬಾಲಕಿಯರು ಘಟನೆ ಸಂಬಂಧ ದೂರು ನೀಡಿದ್ದು ದೂರಿನನ್ವಯ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸರು ಎಫ್ಐಆರ್ ದಾಖಲಿಸಿ ಯೋಗಿಯನ್ನು ಬಂಧಿಸಿ ಜೈಲಿಗೆ ತಳ್ಳಿದ್ದಾರೆ.

Join Whatsapp
Exit mobile version