ನಗ್ನ ವೀಡಿಯೋ ಇದೆ ಎಂದು ಮಹಿಳೆಯರ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿ ಬಂಧನ

Prasthutha|

ಬೆಂಗಳೂರು: ಮಹಿಳೆಯರ ನಗ್ನ ವೀಡಿಯೋ ಹಾಗೂ ಫೋಟೋಗಳನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

- Advertisement -

ಭುವನೇಶ್ವರಿನಗರದ ಮಹಾಂತೇಶ್ (37) ಬಂಧಿತ ಆರೋಪಿಯಾಗಿದ್ದಾನೆ, ಬಂಧಿತನು ಮಹಿಳೆಯರಿಗೆ ಕರೆ ಮಾಡಿ ನಗ್ನ ವಿಡಿಯೋ, ಫೋಟೋ ಇದೆ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ ಹಣಕ್ಕೆ ಡಿಮಾಂಡ್ ಮಾಡುತ್ತಿದ್ದ ಎನ್ನಲಾಗಿದೆ.

ಇದೇ ರೀತಿ ನಗ್ನ ವೀಡಿಯೋ ಹಾಗೂ ಫೋಟೋಗಳಿದ್ದು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಕರೆ ಮಾಡಿ, 30 ಲಕ್ಷ ಹಣಕ್ಕೆ ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿದ್ದಾನೆ.

- Advertisement -

ಇದರಿಂದ ಬೇಸತ್ತ ಮಹಿಳೆಯು ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡ ಇನ್ಸ್ ಪೆಕ್ಟರ್ ಆಶೋಕ್ ರಾಮ್ ಮತ್ತವರ ಸಿಇಎನ್ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯು ವಿಚಾರಣೆ ವೇಳೆ ಹಲವು ಮಹಿಳೆಯರಿಗೆ ವಂಚನೆ ಮಾಡಿರುವುದನ್ನು ಬಾಯ್ಬಿಟ್ಟಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ.

Join Whatsapp