ಲಕ್ನೋ: ಮದುವೆಯಾಗುವುದಾಗಿ ನಂಬಿಸಿ ನರ್ಸ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 59 ವಯಸ್ಸಿನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಭದೋಹಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಪ್ರಯೋಗಾಲಯ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದ ಚಿಂತಾಮಣಿ ಶರ್ಮಾ ಎಂಬ ವ್ಯಕ್ತಿ 39 ವಯಸ್ಸಿನ ನರ್ಸ್ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪ ಕೇಳಿಬಂದಿದೆ.
ಆರೋಪಿ ವಿರುದ್ಧ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ಸಬಿಹಾ ಖಾತೂನ್ ನ್ಯಾಯಾಲಯದಲ್ಲಿ ಸಂತ್ರಸ್ತೆ ನರ್ಸ್ ಪ್ರಕರಣದ ವಿಚಾರಣೆ ನಡೆಸಿತ್ತು. ಅರ್ಜಿಯನ್ನು ಆಲಿಸಿದ ಸಿಜೆಎಂ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಗುರುವಾರ ಪೊಲೀಸರಿಗೆ ಆದೇಶಿಸಿದ್ದರು.