ಮುಂಬೈ: ದೆಹಲಿಯಿಂದ ಮುಂಬೈಗೆ ಮಂಗಳವಾರ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ವ್ಯಕ್ತಿಯೊಬ್ಬ ಬೀಡಿ ಸೇದಿದ ಅಪರೂಪದ ಘಟನೆ ನಡೆದಿದ್ದು, ಬಳಿಕ ಆತನನ್ನು ಬಂಧಿಸಲಾಗಿದೆ.
ವಿಮಾನ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಂತೆ ಮೊಹಮ್ಮದ್ ಅಮೃದ್ದೀನ್(42)ನನ್ನು ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ.
ಇಂತಹ ಘಟನೆ ಅಪರೂಪವಾಗಿ ನಡೆಯುತ್ತಿದ್ದು, ಇತ್ತೀಚೆಗೆ ಬೆಂಗಳೂರಿಗೆ ಬರುತ್ತಿದ್ದ ಅಕಾಶ ಏರ್‌ಲೈನ್ಸ್ ವಿಮಾನದಲ್ಲಿ ಮಾರ್ಗಮಧ್ಯೆ ಬೀಡಿ ಸೇದಿದ್ದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.