Home ಟಾಪ್ ಸುದ್ದಿಗಳು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬೆದರಿಕೆ ಹಾಕಿದ ವ್ಯಕ್ತಿ ಬಂಧನ: ಡಿಸಿಎಂ ದೇವೇಂದ್ರ ಫಡ್ನವೀಸ್

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬೆದರಿಕೆ ಹಾಕಿದ ವ್ಯಕ್ತಿ ಬಂಧನ: ಡಿಸಿಎಂ ದೇವೇಂದ್ರ ಫಡ್ನವೀಸ್

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್, ತಮ್ಮ ನೇತೃತ್ವದ ರಾಜ್ಯ ಗೃಹ ಇಲಾಖೆ, ಮುಖ್ಯಮಂತ್ರಿಯ ವಿರುದ್ಧದ ಎಲ್ಲಾ ಬೆದರಿಕೆಗಳ ಬಗ್ಗೆ ಗಮನ ಹರಿಸಿದೆ. ನಾವು ಮುಖ್ಯಮಂತ್ರಿಯ ಭದ್ರತೆ ಮತ್ತು ಇತರ ಅಂಶಗಳ ಬಗ್ಗೆ ಸಂಪೂರ್ಣ ಗಮನ ಹರಿಸುತ್ತಿದ್ದೇವೆ . ಭಾನುವಾರ ಸಿಎಂಗೆ ಧಮ್ಕಿ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಬಂಧಿತ ವ್ಯಕ್ತಿಯ ವಿವರಗಳನ್ನು ಹಂಚಿಕೊಳ್ಳದಿದ್ದರೂ, ಪುಣೆಯ ಲೋನಾವಾಲಾದ ಹೋಟೆಲ್ ನಲ್ಲಿ ಸಿಎಂ ಶಿಂಧೆಯನ್ನು ಕೊಲ್ಲಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ ವ್ಯಕ್ತಿಯ ವಿರುದ್ಧ ಪುಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಖ್ಯಮಂತ್ರಿಯ ಜೀವಕ್ಕೆ ಬೆದರಿಕೆಯ ನಂತರ  ಥಾಣೆಯಲ್ಲಿರುವ ಶಿಂಧೆ ಅವರ ಖಾಸಗಿ ನಿವಾಸ ಮತ್ತು ಮುಂಬೈನ ಅಧಿಕೃತ ನಿವಾಸ ವರ್ಷಾದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

Join Whatsapp
Exit mobile version