ಸ್ಕೂಟರ್ ಸ್ವಚ್ಛಗೊಳಿಸಲು ತ್ರಿವರ್ಣ ಧ್ವಜ ಬಳಕೆ: ವ್ಯಕ್ತಿಯ ಬಂಧನ

Prasthutha|

ನವದೆಹಲಿ: 52 ವರ್ಷದ ವ್ಯಕ್ತಿಯೊಬ್ಬ ತನ್ನ ಸ್ಕೂಟರ್ ಸ್ವಚ್ಛಗೊಳಿಸಲು ರಾಷ್ಟ್ರಧ್ವಜವನ್ನು ಬಳಸಿದ ವೀಡಿಯೋ ವೈರಲ್ ಆಗುತ್ತಿದ್ದಂತೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೀಡಿಯೊದಲ್ಲಿ ಆತ ತನ್ನ ಬಿಳಿ ಸ್ಕೂಟರ್ ಅನ್ನು ಮಡಚಿದ ಧ್ವಜದಿಂದ ಸ್ವಚ್ಛಗೊಳಿಸುವುದನ್ನು ಕಾಣಬಹುದು.

- Advertisement -

“ನಾವು ವೀಡಿಯೊವನ್ನು ನೋಡಿದ್ದೇವೆ. ಆತನ ಮನೆಯನ್ನು ಗುರುತಿಸಿದ್ದೇವೆ ಮತ್ತು  ಬಂಧಿಸಿದ್ದೇವೆ” ಎಂದು ಈಶಾನ್ಯ ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಧ್ವಜ ಮತ್ತು ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದು, ಆ ವ್ಯಕ್ತಿಯ ವಿರುದ್ಧ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971 ರ ಸೆಕ್ಷನ್ 2 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Join Whatsapp