ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನಿಸಿದ ಓರ್ವನನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ ಮುರುಡೇಶ್ವರ ನಿವಾಸಿಯಿಂದ ಅಕ್ರಮ ಚಿನ್ನ ವಶಕ್ಕೆ ಪಡೆಯಲಾಗಿದೆ.
ಆರೋಪಿ ದುಬೈನಿಂದ ಮಹಿಳೆಯರ ಹೇರ್ ಬ್ಯಾಂಡ್ ಇನ್ನಿತರ ವಸ್ತುಗಳ ಮೂಲಕ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ತಂದಿದ್ದಾನೆ. ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುವಾಗ ಚಿನ್ನ ಪತ್ತೆಯಾಗಿದೆ. ಒಟ್ಟು 5,58,600 ಲಕ್ಷ ರೂ.ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಇತ್ತೀಚಿಗೆ ಕಾಸರಗೋಡು ಮೂಲದ ವ್ಯಕ್ತಿಯೋರ್ವ ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವೇಳೆ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ ಒಟ್ಟು 16,58,087 ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದರು.