ಮಂಗಳೂರು: ಬೈಕಂಪಾಡಿಯ ಮೀನಕಳಿಯ ಬಳಿ ತಡರಾತ್ರಿ ಯುವಕನ ಮೇಲೆ ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದು, ಯುವಕ ಚಿಕಿತ್ಸೆ ಫಲಿಸದೇ ಆಸ್ಪತ್ರೆ ಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮೃತ ಯುವಕನನ್ನು ರಾಘವೇಂದ್ರ ಯಾನೆ ರಾಜ (28) ಎಂದು ತಿಳಿದು ಬಂದಿದೆ.
ಇಬ್ಬರು ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಬಳಿಕ ಗಂಭೀರ ಸ್ಥಿತಿಯಲ್ಲಿದ್ದ ರಾಘವೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.