ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ವ್ಯಕ್ತಿ ಸಜೀವ ದಹನ

Prasthutha|

ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ನಡೆದಿದೆ.

- Advertisement -

ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ.

ಘಟನೆಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp