ಬಂಟ್ವಾಳ: ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Prasthutha|

ಬಂಟ್ವಾಳ: ವ್ಯಕ್ತಿಯೋರ್ವ ನೀರಿಗೆ ಹಾರಿ ಆತ್ಮಹತ್ಯೆ ಮಾಡಿರುವ ಘಟನೆ ಪಾಣೆಮಂಗಳೂರು ಸಮೀಪದ ನಂದಾವರ ಸೇತುವೆ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. 

- Advertisement -

ತಾಲೂಕಿನ ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಸಣ್ಣ ಪುಟ್ಟ ಖಾಯಿಲೆಯಿಂದ ಇವರು ಬಳಲುತ್ತಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

Join Whatsapp